ಜೂನ್ 18ಕ್ಕೆ ಪಿಯುಸಿ, ಜೂನ್ 25 ರಿಂದ ಎಸ್‌ಎಸ್‌ಎಲ್ ಸಿ ಪರೀಕ್ಷೆ ಆರಂಭ: ಸಚಿವ ಸುರೇಶ್ ಕುಮಾರ್

0
804

ಹೆಚ್ಚಿನ ಓದುಗರು ಈ ಸುದ್ದಿಯನ್ನು ಸಮ್ಮತ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (1) ಅಸಮ್ಮತ (0) ಖಂಡಿಸುವೆ (1) ಅಭಿಪ್ರಾಯವಿಲ್ಲ (0)

ಮೇ. 18 ; .ಬಹುನಿರೀಕ್ಷಿತ ಎಸ್ಸೆಸ್ಸೆಲ್ಸಿ ಪರೀಕ್ಷೆ ದಿನಾಂಕ ಕೊನೆಗೂ ಪ್ರಕಟವಾಗಿದೆ. ಜೂನ್ 26 ರಿಂದ ಜುಲೈ 4 ರ ವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ನಡೆಯಲಿವೆ ಎಂದು ಶಿಕ್ಷಣ ಸಚಿವ ಸುರೇಶ ಕುಮಾರ್ ತಿಳಿಸಿದ್ದಾರೆ.

ಇಂದು ಸುದ್ದಿಘೋಷ್ಠಿ ನಡೆಸಿದ ಶಿಕ್ಷಣ ಸಚಿವ ಸುರೇಶ ಕುಮಾರ್ ವೇಳಾಪಟ್ಟಿ ಪ್ರಕಟ ಮಾಡಿದರು. ಕೋವಿಡ್ – 19 ಆತಂಕದ ನಡುವೆ ಗೊಂದಲದಲ್ಲಿದ್ದ ಪರೀಕ್ಷಾ ದಿನಾಂಕವನ್ನು ಕೊನೆಗೂ ಪ್ರಕಟಿಸಿದ್ದು 2879 ಕೇಂದ್ರಗಳಲ್ಲಿ 848196 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ವಹಿಸಿ ಪರೀಕ್ಷೆ ಬರೆಯಲು ಆರೋಗ್ಯ ಇಲಾಖೆ ಸಹಯೋಗದೊಂದಿಗೆ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. 43720 ಕೊಠಡಿಗಳಲ್ಲಿ ಪರೀಕ್ಷೆ ಬರೆಯಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ತಪಾಸಣಾ ಸ್ಕ್ರೀನ್ ಜತೆಗೆ ಸ್ಯಾನಿಟೈಸರ್ ವ್ಯವಸ್ಥೆಯನ್ನು ಮಾಡಲಾಗುವುದು, ವಿದ್ಯಾರ್ಥಿಗಳು ಹಾಗೂ ಪರೀಕ್ಷಾ ಮೇಲ್ವಿಚಾರಕರು ಶಿಕ್ಷಕರು ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ.

ಪ್ರತಿ ವಿದ್ಯಾರ್ಥಿಯನ್ನು ತಪಾಸಣೆ ಮಾಡಿ ಪರೀಕ್ಷಾ ಕೇಂದ್ರದ ಒಳಗೆ ಬಿಡಲಾಗುವುದು. ಮತ್ತು ಅವರಿಗೆ ಎಲ್ಲ ರೀತಿಯ ಆರೋಗ್ಯ ನೆರವು ನೀಡಲಾಗುತ್ತದೆ . ಪರೀಕ್ಷಾ ಕೇಂದ್ರಕ್ಕೆ ಬರುವಂತಹ ವಿದ್ಯಾರ್ಥಿಗಳಲ್ಲಿ ಯಾರಿಗಾದರೂ ಜ್ವರ-ಅನಾರೋಗ್ಯ ಇದ್ದರೆ ಅಂತವರಿಗೆ ಪರೀಕ್ಷೆ ಬರೆಯಲು ಪ್ರತ್ಯಾಕ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಸ್ಯಾನಿಟೈಸರ್ ವ್ಯವಸ್ಥೆಯನ್ನು ಎಂಬೆಸಿ ಕಂಪನಿ ಮಾಡಿದೆ. ವಿದ್ಯಾರ್ಥಿಗಳಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ನೆರವು ನೀಡಲಿದೆ.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಸಮ್ಮತ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (1) ಅಸಮ್ಮತ (0) ಖಂಡಿಸುವೆ (1) ಅಭಿಪ್ರಾಯವಿಲ್ಲ (0)