ಉತ್ತರಪ್ರದೇಶ ರಾಜ್ಯ ಸರ್ಕಾರಕ್ಕೆ 36 ಸಾವಿರ ಕೋಟಿ ಹೊರೆ – ರೈತರ 1 ಲಕ್ಷ ರು. ವರೆಗಿನ ಸಾಲ ಮನ್ನಾ: ಯೋಗಿ ಆದಿತ್ಯನಾಥ್

0
1024

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (2) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

yogi-adityanath-PTI

 

ಲಖನೌ: ಉತ್ತರಪ್ರದೇಶ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ ಸಭೆ ನಡೆಸಿದ ಯೋಗಿ ಅದಿತ್ಯನಾಥ ಅವರು ಸಭೆಯಲ್ಲಿ ರೈತರು ಪಡೆದಿದ್ದ 1 ಲಕ್ಷ ರು.ವರೆಗಿನ ಸಾಲವನ್ನು ಮನ್ನಾ ಮಾಡುವ ನಿರ್ಧಾರವನ್ನು ಕೈಗೊಂಡಿದ್ದಾರೆ.

ಬಿಜೆಪಿ ಚುನಾವಣಾ ಪ್ರಣಾಳಿಕೆಯಲ್ಲಿ ಉತ್ತರಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ರೈತರ ಸಾಲ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳನ್ನು ಪ್ರಕಟಿಸಿತ್ತು. ಇದೀಗ ಮೊದಲನೇಯದಾಗಿ ಯೋಗಿ ಆದಿತ್ಯನಾಥ ಅವರು ರಾಜ್ಯದ ರೈತರ ಸಾಲ ಮನ್ನಾ ಮಾಡುವ ಮೂಲಕ ಮೊದಲನೇಯ ಹೆಜ್ಜೆ ಇಟ್ಟಿದ್ದಾರೆ. ಸಾಲ ಮನ್ನಾದಿಂದಾಗಿ ಉತ್ತರ ಪ್ರದೇಶ ಸುಮಾರು 2.25 ಕೋಟಿ ರೈತರಿಗೆ ಅನುಕೂಲವಾಗಲಿದ್ದು, ಸಾಲ ಮನ್ನಾದಿಂದಾಗಿ ರಾಜ್ಯ ಸರ್ಕಾರಕ್ಕೆ 36 ಸಾವಿರ ಕೋಟಿ ಹೊರೆ ಬೀಳಲಿದೆ.

ಉತ್ತರಪ್ರದೇಶದಲ್ಲಿ 2.15 ರಿಂದ 2.30 ಕೋಟಿ ಮಂದಿ ವ್ಯವಸಾಯದಲ್ಲಿ ತೊಡಗಿಕೊಂಡಿದ್ದಾರೆ. ನೈಸರ್ಗಿಕ ವಿಪತ್ತಿನಿಂದಾಗಿ ಸುಮಾರು 62 ಸಾವಿರ ಕೋಟಿ ರುಪಾಯಿ ಸಾಲವನ್ನು ರೈತರು ಪಾವತಿಸಲು ಅಸಾಧ್ಯವಾಗಿದ್ದು ಈ ಹಿನ್ನೆಲೆಯಲ್ಲಿ ಸರ್ಕಾರ ರೈತರ ಹೊರೆಯನ್ನು ಕಡಿಮೆ ಮಾಡಲು 36 ಸಾವಿರ ಕೋಟಿ ಸಾಲವನ್ನು ಮನ್ನಾ ಮಾಡಿದೆ.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (2) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

B.G.Mohandas (ಬೀಜಿ)

B.G.Mohandas; M.Pharm FAGE DBM Founder ; GulfKannadiga.com & Kannadigaworld.com; kollur.com, devadiga.com & byndoor.com | Formerly Head of Pharmacy at Gulf Medical University, Dubai & Professor KMC Manipal